Friday, September 20, 2024

Latest Posts

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್​ಶೀಟ್​ ಸಲ್ಲಿಕೆ: ಮಾಜಿ ಸಚಿವ ನಾಗೇಂದ್ರಗೆ SIT ಕ್ಲೀನ್ ​​ಚಿಟ್

- Advertisement -

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್​ಐಟಿ (special investigation team) ಜಾರ್ಜ್​​ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister Nagendra) ಹೆಸರನ್ನು ಕೈಬಿಟ್ಟಿದ್ದಾರೆ. ಸಿಐಟಿ ಸಲ್ಲಿಸಿರುವ ಚಾರ್ಜ್​​ಶೀಟ್​ನಲ್ಲಿ ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರನ್ನು ಹೊಣೆಯಾಗಿಸಲಾಗಿದೆ.

ಚಂದ್ರಶೇಖರ್​ ಆತ್ಮಹತ್ಯೆ ಪ್ರಚೋದನೆಗೆ ನಿಗಮದ ಎಂಡಿ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರೇ ಕಾರಣ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ನಿಗಮದ ಹಗರಣದಲ್ಲಿ ಒಂದಿಷ್ಟು ಹಣವನ್ನು ಚಂದ್ರಶೇಖರ್ ಪಡೆದಿರುವುದಾಗಿ, ಈ ಪ್ರಕರಣ ಬೆಳಕಿಗೆ ಬಂದರೆ ಸಿಕ್ಕಿಬೀಳುವ ಭಯದಿಂದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್​​ಶೀಟ್​ನಲ್ಲಿ ಎಸ್​ಐಟಿ ತಂಡ ಉಲ್ಲೇಖಿಸಿದೆ. ಚಂದ್ರಶೇಖರ್​ರನ್ನು ಗೋವಾ ಮತ್ತು ಹೈದರಾಬಾದ್​ಗೆ ಕರೆದುಕೊಂಡು ಹೋಗಿದ್ದ ನಿಗಮದ ಎಂಡಿ ಪದ್ಮನಾಭ್, ನೀನು ಹಣ ಪಡೆದಿದ್ದೀಯಾ. ಈ ಪ್ರಕರಣ ಬೆಳಕಿಗೆ ಬಂದರೆ ನೀನೊಬ್ಬನೇ ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾನೇ ದೂರು ಕೊಡ್ತೀನಿ ಎಂದು ಪದ್ಮನಾಭ್ ಚಂದ್ರಶೇಖರ್‌ಗೆ ಬೆದರಿಸಿದ್ದರು ಎಂದು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

 

ವಾಲ್ಮೀಕಿ ಹಗರಣ ತನಿಖೆ ನಡೆಸಿ ಇದೀಗ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿರುವ ವಿಶೇಷ ತನಿಖಾ ತಂಡ ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಹೆಸರನ್ನು ಕೈ ಬಿಟ್ಟಿದ್ದಾರೆ. ಹಗರಣದಲ್ಲಿ ಎಸ್​ಐಟಿ ಅಧಿಕಾರಿಗಳು ನಾಗೇಂದ್ರಗೆ ಕ್ಲೀನ್​ ಚಿಟ್ ಕೊಟ್ಟಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಆಡಳಿತರೂಢ ಕಾಂಗ್ರೆಸ್​ ಹಾಗೂ ಪ್ರತಿಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ 2024-25ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟಿದ್ದ ₹187 ಕೋಟಿ ಹಣದಲ್ಲಿ ₹88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ತರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಫೆಬ್ರವರಿ 26ರಂದು ಬ್ಯಾಂಕ್‌ನವರು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ ಹಂತವಾಗಿ ₹187.33 ಕೋಟಿ ಹಣವನ್ನು ವರ್ಗಾವಣೆ ಮಾಡಿದ್ದರು. ಮಾರ್ಚ್​ 4ರಂದು ₹25 ಕೋಟಿ, ಮಾರ್ಚ್​ 6ರಂದು ₹25 ಕೋಟಿ, ಮಾರ್ಚ್ 21ರಂದು ₹44 ಕೋಟಿ, ಮಾರ್ಚ್ 22ರಂದು ₹43.33 ಕೋಟಿ ಹಾಗೂ ಮೇ 21ರಂದು ₹50 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು.

- Advertisement -

Latest Posts

Don't Miss