Sunday, July 6, 2025

Latest Posts

Hubballi ; ಹುಬ್ಬಳ್ಳಿ ಬಳಿ ರಸ್ತೆ ಅಪಘಾತ, ಒಂದೇ‌ ಕುಟುಂಬದ 3 ಜನ ಸಾ*ವು

- Advertisement -

ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಶುಕ್ರವಾರ ಪಾರ್ಶವಾಯು ಔಷಧಿ ತರಲು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು ಮರಳಿ ಊರಿಗೆ ಹೋಗುತ್ತಿದ್ದ ವೇಳೆ ರಾತ್ರಿ 10 ಗಂಟೆ ಸಮಾರಿಗೆ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest Posts

Don't Miss