- Advertisement -
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು ಹೆಚ್ಚಳವಾಾಗಿದೆ. ಒಳಹರಿವು ಹೆಚ್ಚಳ ಹಿನ್ನಲೆಯಲ್ಲಿ ಜಲಾಶಯದಿಂದ 8 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆಯಾಗಿದೆ. ಹಾಗಾಗಿ ಮಲಪ್ರಭಾ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
- Advertisement -