Hubli News: ಹುಬ್ಬಳ್ಳಿ: ಅವಳಿ ನಗರದಲ್ಲಿ ಸಂಚಾರಿ ನಿಯಮ ಮೀರಿದ್ದೂ ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿಯಾಗಿ ಬೈಕ್ ಸವಾರಿ ಮಾಡಿದ ಆರೋಪದಡಿಯಲ್ಲಿ ಧಾರವಾಡ ಸಂಚಾರಿ ಪೊಲೀಸರು ಎರಡು ಬೈಕ್ಗಳನ್ನ ಸೀಜ್ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಸಂಚಾರಿ ವಿಭಾಗದ ಡಿಸಿಪಿ ರವೀಶ ಅವರು ಬೈಕ್ ವೀಲಿಂಗ್ ಮಾಡುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಚಾರಿ ಇನ್ಸ್‌ಪೆಕ್ಟರ್‌ಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಧಾರವಾಡ ಸಂಚಾರಿ ಠಾಣೆಯ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಮೇಟಿ ಧಾರವಾಡದಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದ ಓರ್ವ ಯುವತಿ ಹಾಗೂ ಯುವಕನ ಬೈಕ್ ಸೀಜ್ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ.
ರಾಣೆಬೆನ್ನೂರು ಮೂಲದ 22 ವಯಸ್ಸಿನ ಕೋಮಲ್ KTM 250ರಲ್ಲಿ ವೀಲಿಂಗ್ ಮಾಡ್ತಿದ್ದರೆ ಧಾರವಾಡ ಮೂಲದ 21 ವರ್ಷದ ಪ್ರಜ್ವಲ್ ಎಂಬುವ KTM 350 ಬೈಕ್‌ನಲ್ಲಿ ವೀಲಿಂಗ್ ಮಾಡುತ್ತಿದ ವಿಡಿಯೋ ನೋಡಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಮೇಟಿ ಎರಡು ಬೈಕ್‌ಗಳನ್ನು ಸೀಜ್ ಮಾಡಿದ್ದಾರೆ. ಈ ಇಬ್ಬರ ಮೇಲೆ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.