ಕೋಲಾರದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ದರ್ಪ ತೋರಿದ ಪುಂಡರು

Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದ ವಿಷ್ಣು ಎಂಬ ಯುವಕ, ಅದೇ ಊರಿನ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿರುವಾಗ, ಅಡ್ಡಗಟ್ಟಿದ ಮುಸ್ಲಿಂ ಯುವಕರು, ಆತನ ಮೇಲೆ ದರ್ಪ ತೋರಿದ್ದಾರೆ.

ಬೈಕ್‌ನಲ್ಲಿ ಹೋಗುತ್ತಿದ್ದವರನ್ನು ತಡೆದು, ಮುಸ್ಲಿಂ ಯುವಕರು ದಾರಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ತೋರಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡ ಪೊಲೀಸರು, ಯುವಕನನ್ನು ಠಾಣೆಗೆ ಕರೆಸಿ, ಕಂಪ್ಲೆಂಟ್ ಬರೆಸಿಕೊಂಡಿದ್ದಾರೆ.

ಮುಸ್ಲಿಂ ಮಹಿಳೆ ತನ್ನ ಮಗುವಿನೊಂದಿಗೆ, ವಿಷ್ಣು ಎಂಬ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿರುವಾಗ, ಅವರನ್ನು ಅಡ್ಡಗಟ್ಟಿ ಬೆದರಿಕೆ ಹಾಕಲಾಾಗಿದೆ. ಬೆದರಿಕೆ ಹಾಕಿದವರು ಮತ್ತು ಈ ದೃಶ್ಯವನ್ನು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ದೂರು ದಾಖಲಿಸಲಾಗಿದೆ.

About The Author