Sunday, November 16, 2025

Latest Posts

8 ಪೊಲೀಸರ ಸಾವಿಗೆ ಕಾರಣನಾದ ರೌಡಿ ಶೀಟರ್‌ ಮನೆ ಧ್ವಂಸ: 25ಪೊಲೀಸರ ತಂಡ ನಿಯೋಜನೆ..!

- Advertisement -

ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿದ್ದಾಗ, ಆತ 8 ಪೊಲೀಸರನ್ನ ಹತ್ಯೆಗೈದಿದ್ದ. ಈ ಕಾರಣಕ್ಕೆ ಆತನ ಮನೆಯನ್ನು ನೆಲಸಮ ಮಾಡಲಾಗಿದೆ.

ಅಲ್ಲದೇ, ವಿಕಾಸ್‌ನನ್ನು ಹಿಡಿಯಲು 25 ಪೊಲೀಸರ ತಂಡವನ್ನ ನೇಮಿಸಲಾಗಿದೆ. ರೌಡಿ ವಿಕಾಸ್ ದುಬೆ ಪೊಲೀಸರಿಗೆ ಯಾವ ರೀತಿಯಾಗಿ ತಲೆ ನೋವಾಗಿ ಪರಿಣಮಿಸಿದ್ದಾನೆಂದರೆ, ಆತನ ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಾಹಿತಿ ನೀಡಿದವರ ಬಗ್ಗೆ ಎಲ್ಲೂ ಗುಟ್ಟು ರಟ್ಟು ಮಾಡುವುದಿಲ್ಲ ಎಂದಿದ್ದಾರೆ.

ಇನ್ನು 8 ಮಂದಿ ಪೊಲೀಸರನ್ನ ಕೊಂದು 36 ಗಂಟೆಯಾದರೂ ದುಬೆ ಬಗ್ಗೆ ಯಾವ ಸುಳಿವೂ ಸಿಗಲಿಲ್ಲ. ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಗಳಿಗೆ 1ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ.

ಗಾಯಗೊಂಡ 7 ಪೊಲೀಸರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಕಾಸ್‌ಗೆ ತಕ್ಕ ಶಿಕ್ಷೆ ಆಗಬೇಕು ಎಂದು ವಿಕಾಸ್ ತಾಯಿ ಹೇಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss