Friday, September 20, 2024

Latest Posts

ಡಿ.ಕೆಂಪಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

- Advertisement -

Political News: ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಾವನ್ನಪ್ಪಿದ್ದಾರೆ.

84 ವರ್ಷದ ಕೆಂಪಣ್ಣ ಹೃದಯಾಘಾತದಿಂದ ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೊನ್ನೆಯಷ್ಟೇ ಡಿಸ್ಚಾರ್ಜ್ ಆಗಿ ಮನೆಗೆ ಬಂದ ಕೆಂಪಣ್ಣ, ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಂಪಣ್ಣ ನಿಧನಕ್ಕೆ ಸಿಎಂ ಸಂತಾಪ ಸೂಚಿಸಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಂಪಣ್ಣ ನಿಧನಕ್ಕೆ ಡಿಸಿಎಂ ಡಿಕೆಶಿ ಕೂಡ ಸಂತಾಪ ಸೂಚಿಸಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀ ಕೆಂಪಣ್ಣ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಹೊರತಂದು ನಿರ್ಭೀತವಾಗಿ ಹೋರಾಡಿದ ಅವರ ನೇರ, ನಿಸ್ಪಕ್ಷಪಾತ ನಡೆ ಶ್ಲಾಘನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss