Friday, September 20, 2024

Latest Posts

ಜಲಜೀವನ ಮಷಿನ್ ಯೋಜನೆಯ ಅವ್ಯವಸ್ಥೆ: ಗುಂಡಿಯಿಂದ ಗ್ರಾಮಸ್ಥರಿಗೆ ಗಂಡಾಂತರ..!

- Advertisement -

Hubli News: ಹುಬ್ಬಳ್ಳಿ: ಅದು ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ ಮಷಿನ್ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ಈ ಯೋಜನೆ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕಂಟಕವಾಗಿದೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಜಲಜೀವನ ಮಷಿನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ ಎಲ್ಲೆಂದರಲ್ಲಿ ತಗೆದಿರುವ ಗುಂಡಿಗಳನ್ನು ಸಮರ್ಪಕ ರೀತಿಯಲ್ಲಿ ಮುಚ್ಚದೇ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ‌.

ಈ ನಿಟ್ಟಿನಲ್ಲಿ ರೈತನಿಗೆ ಆಸರೆಯಾಗಿದ್ದ ದನವೊಂದು ಗುಂಡಿಯಲ್ಲಿ ಬಿದ್ದು ಕಾಲು ಮುರಿದುಕೊಂಡಿದ್ದು, ಸಾರ್ವಜನಿಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ಶಿರಗುಪ್ಪಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಜೆಜೆಎಂ ಕಾಮಗಾರಿ ನಡೆಯುತ್ತಿದೆ. ಆದರೆ ನಳ ಜೋಡಣೆಗೆ ತೆಗೆದಿರುವ ಗುಂಡಿಗಳನ್ನು ಮುಚ್ಚದೇ ಇರುವ ಹಿನ್ನೆಲೆಯಲ್ಲಿ ಒಂದಿಲ್ಲೊಂದು ಸಮಸ್ಯೆ ಉದ್ಬವಿಸುತ್ತಲೇ ಇದೆ. ಈ ಬಗ್ಗೆ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಕಾಮಗಾರಿ ವಿಳಂಬದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಇನ್ನೂ 2.40 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಅವ್ಯವಸ್ಥೆಯಿಂದ ಜನರು ಸಮಸ್ಯೆಗಳನ್ನು ಅನುಭವಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಅದೆಷ್ಟೋ ಬಾರಿ ಸೂಚನೆ ನೀಡಿದರೂ ನಿಗದಿತ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದೇ ಇರುವುದು ಸಮಸ್ಯೆ ತಂದೊಡ್ಡಲು ಕಾರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡಬೇಕಿದೆ.

ಸಂಗಮೇಶ್ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ

- Advertisement -

Latest Posts

Don't Miss