Sunday, September 22, 2024

Latest Posts

Political News: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

- Advertisement -

Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿದ್ದು, ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಸುಷ್ಮಾಸ್ವರಾಜ್ ಕಾರ್ಯ ನಿರ್ವಹಿಸಿದ್ದರು. ಬಳಿಕ ಶೀಲಾ ದಿಕ್ಷೀತ್ ಸಿಎಂ ಆಗಿದ್ದರು. ಇದೀಗ ಅತಿಶಿ, ದೆಹಲಿಯ ಮೂರನೇ ಮಹಿಳಾ ಸಿಎಂ ಜೊತೆಗೆ, ಕಿರಿಯ ವಯಸ್ಸಿನ ಮಹಿಳಾ ಸಿಎಂ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಇಂದು ದೆಹಲಿಯ ರಾಜ್ ನಿವಾಸದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ, ರಾಜ್ಯಪಾಲರ ಸೂಚನೆಯಂತೆ ಪ್ರಮಾಣವಚನ ಸ್ವೀಕಾರ ಮಾಡಿದರು. ಅತಿಶಿ ಅವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೊದಲು ಸೆಪ್ಟೆಂಬರ್‌ 26-27ರ ಅಧಿವೇಶನದ ವೇಳೆ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಗಿತ್ತು.

2020ರಲ್ಲಿ ಅತಿಶಿ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಕಲ್ಕಾಜಿಯಿಂದ ಗೆಲುವು ಕಂಡಿದ್ದರು. ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕುರಿತು ಪಕ್ಷದ ಮುಖಂಡರು ಯೋಚಿಸಿದ್ದರು. ಶನಿವಾರ (ಇಂದು) ಅತಿಶಿ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿದ್ದ ಎಎಪಿ ನಾಯಕರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರು ಸಚಿವರಾಗಿ ಮುಂದುವರೆಯಲಿದ್ದು, ಪಕ್ಷದ ಇಬ್ಬರು ಶಾಸಕರನ್ನು ಸಹ ಹೊಸ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಾಗಿದೆ. ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಅತಿಶಿ ಅವರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

Latest Posts

Don't Miss