Wednesday, October 15, 2025

Latest Posts

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ: ಸೋಮಣ್ಣ

- Advertisement -

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ ಮಾಡಬೇಕು ಎಂದರು.

ಪ್ರಿಯಾಂಕ ಖರ್ಗೇ ಅವರು ಬಿಜೆಪಿಯವರು ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಂವಿಧಾನ ಎನ್ನುವುದು ಪ್ರಿಯಾಂಕ ಖರ್ಗೇ ಅವರಿಗೆ ಒಬ್ಬರಿಗೆ ಮಾತ್ರಯಿಲ್ಲ. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿದ್ದಾರೆ. ಹೀಗಾಗಿ ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ಅವರ ಸಂವಿಧಾನದ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರ ಜೊತೆಗೆ ಕೆಲಸ ಮಾಡಿದ್ದೇನೆ.‌ ಅವರ ವಿರುದ್ಧ ಚುನಾವಣೆ ಎದುರಿಸಿದ್ದೇನೆ‌.‌ ಹೀಗಾಗಿ ಅವರ ಬಗ್ಗೆ ಬಲ್ಲವನಾಗಿದ್ದೇನೆ.‌ ಸಿದ್ದರಾಮಯ್ಯ ಅವರು ಕಾನೂನನ್ನು ಗೌರವಿಸತ್ತಾರೆ. ಅವರೇ ಪದೇ ಪದೇ ತಮ್ಮ ಜೀವನ ತೆರೆದ ಪುಸ್ತಕ ಎಂದು ಹೇಳತ್ತಾರೆ. ಆದರೆ ಇದೀಗ ತೆರೆದ ಪುಸ್ತಕದಲ್ಲಿ ತಪ್ಪುಗಳಾಗಿವೆ. ಹೀಗಾಗಿ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಈ ಹಿಂದೆ ಅನೇಕ ಘಟಾನುಘಟಿ ನಾಯಕರು ಸಹಿತ ತಮ್ಮ ವಿರುದ್ಧ ಆರೋಪ ಬಂದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ತನಿಖೆ ಬಳಿಕ ಕ್ಲಿನ್ ಚೀಟ್ ಬಂದಮೇಲೆ ಮುಖ್ಯಮಂತ್ರಿ ಆಗಲಿ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ಬಿಜೆಪಿಯಲ್ಲಿ ಬಣ ರಾಜಕಾರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಮ್ಮ‌ಲ್ಲಿ ಬಣವು, ಪಣವು ಇಲ್ಲ. ಮನೆಯಲ್ಲಿ ಬುದ್ದಿವಂತರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸ್ವಲ್ಪ ಭಿನ್ನಾಭಿಪ್ರಾಯ ಬರುವುದು ಸಹಜ ಎಂದರು.

- Advertisement -

Latest Posts

Don't Miss