Political News: ಬೆಂಗಳೂರಿನ ವೈಯಾಲಿಕಾವಲ್ನಲ್ಲರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದೆ. ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.
ಅತ್ಯಾಚಾರ, ಜಾತಿ ನಿಂದನೆ, ಗುತ್ತಿಗೆದಾನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೇಗೋ ಹೊರಬಂದ ಮುನಿರತ್ನ ಮರುದಿನವೇ, ಅತ್ಯಾಚಾರ ಪ್ರಕರಣದಡಿ ಮತ್ತೆ ಜೈಲು ಸೇರಿದ್ದರು.
ಇದೀಗ ಮುನಿರತ್ನ ನಿವಾಸ ಸೇರಿ ಒಟ್ಟು 15 ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಇವರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಕೂಡ ಜೊತೆಗಿದ್ದು, ಹಲವು ವಿಷಯಗಳ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ.




