- Advertisement -
ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 19 ವರ್ಷದ ಪುತ್ರ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಾನೆ.
ಕಂಠಪೂರ್ತಿ ಕುಡಿದಿದ್ದ ಸಂತೋಷ್ ಮನೆಗೆ ಬಂದಿದ್ದ. ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡು ದೊಣ್ಣೆಯಿಂದ ತಾಯಿ ಪ್ರೇಮ ತಲೆಗೆ ಬಲವಾಗಿ ಹೊಡೆದಿದ್ದಾನೆ.
45 ವರ್ಷದ ಪ್ರೇಮ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- Advertisement -