Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಏನಿದು ಘಟನೆ?
2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಕುರಿತು ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿಯನ್ನು ಹಿಂಪಡೆಯುವಂತೆ ಹೇಳಿ, ಉಪ ಮೇಯರ್ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರಂತೆ.
ಈ ಹಿನ್ನಲೆ ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪರಶುರಾಮ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಸೂಚನೆ ನೀಡಿದೆ. ಇದರಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!
ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

