Saturday, May 25, 2024

Latest Posts

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

- Advertisement -

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿ ವಿಚಾರಣೆ ಎಂದು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಾಗ ಬಿಜೆಪಿ ನಾಯಕ ಬಸನಗೌಡ ಪಾಟೀಲ್, ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನವಿದೆ ಎಂದಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ

- Advertisement -

Latest Posts

Don't Miss