Wednesday, July 2, 2025

Latest Posts

ಲಜ್ಜೆಗೆಟ್ಟ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್

- Advertisement -

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್‌ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇರಿಸಿರುವ ಘಟನೆ ನಡೆದಿದೆ. 

ಈ ಘಟನೆಯನ್ನು ಖಂಡಿಸಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಜ್ಜೆಗೆಟ್ಟ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ! ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್‌ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇಟ್ಟು ಸರ್ಕಾರಿ ನೌಕರನಿಗೆ 20 ಸಾವಿರ ಲಂಚ ನಿಡೀದ ಆರೋಪದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. S’TAX ನಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ, ಬಡವರು ತಮ್ಮ ಮೂಲಭೂತ ಸೌಕರ್ಯಗಳಿಗಾಗಿ ತಾಳಿಯನ್ನು ಅಡವಿಟ್ಟು ಹಣ ಹೊಂದಿಸುವ ಪರಿಸ್ಥಿತಿ ನಿರ್ಮಾಣ ಮಾಡಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ನಾವೆಲ್ಲರೂ ಖಂಡಿಸೋಣ ಎಂದು ನಿಖಿಲ್ ಹೇಳಿದ್ದಾರೆ.

https://youtu.be/RtFdzhSXS24
- Advertisement -

Latest Posts

Don't Miss