Friday, July 18, 2025

Latest Posts

ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ – ಶ್ವೇಚ್ಛಾ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮೇಲೆ ಅನುಮಾನ!

- Advertisement -

ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ ನ್ಯೂಸ್ ಚಾನೆಲ್‌ನಲ್ಲಿ ಶ್ವೇಚ್ಛಾ ಅವರು ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಶ್ವೇಚ್ಛಾ ಅವರು ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾಬಾದ್‌ನ ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಶ್ವೇಚ್ಛಾ ತನ್ನ ತಾಯಿ ಶ್ರೀದೇವಿ ಅವರೊಂದಿಗೆ ರಾಮ್ ನಗರದಲ್ಲಿ ವಾಸಿಸುತ್ತಿದ್ದರು. ಆದರೆ ಯಾಕೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಶ್ವೇಚ್ಛಾ ಈ ಹಿಂದೆ ಟಿವಿ9 ತೆಲುಗಿನಲ್ಲಿ ಸುದ್ದಿ ನಿರೂಪಕಿಯಾಗಿ ಕೆಲಸ ಮಾಡಿದ್ದರು. ನಂತರ ಟಿ ನ್ಯೂಸ್‌ ನಲ್ಲಿ ಕೆಲಸ ಮಾಡಿತ್ತಿದ್ದರು. ಅದಾಗ್ಯೂ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು, ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಕ್ಯಾಪ್ಷನ್ ನಲ್ಲಿ ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ ಎಂಬ ಬುದ್ಧನ ಉಲ್ಲೇಖವನ್ನು ಬರೆದುಕೊಂಡಿದ್ದಾರೆ. ಈಗೆ ಬರೆದಿರುವುದು ಇದೀಗ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಸಾವಿನ ಹಿಂದೆ ಕೌಟುಂಬಿಕ ಸಮಸ್ಯೆಗಳಿರಬಹುದು ಎಂದು ಶಂಕಿಸಲಾಗಿದೆ ಮತ್ತು ಪೊಲೀಸರು ಇದನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿ ಹೆಚ್ಚಿನ ತನಿಖೆ ಪ್ರಾರಂಭಿಸಿದ್ದಾರೆ.

- Advertisement -

Latest Posts

Don't Miss