Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!

ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.

ಕೋಲಾರ ಹೊರವಲಯದಲ್ಲಿ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಗಂಡು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ.

ಹಾಗಾದರೆ ಈ ಪ್ರಕರಣ ಏನು ಅಂತಾ ನೊಡೊದಾದ್ರೆ.. ಬಾಲಕಿ ಯುವಕನೊಂದಿಗೆ ಪ್ರೀತಿಯಲ್ಲಿದ್ದಳು .ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಬಾಲಕಿಯ ಸ್ಥಿತಿಗೆ ಕಾರಣನಾದ ಯುವಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ.

ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ. ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

About The Author