Hubli News: ಹುಬ್ಬಳ್ಳಿ: ನಗರದ ವ್ಯಾಪಾರಿ ಚಗನ್‌ಲಾಲ್ ಚೌಧರಿ ಅವರ ಬೆತ್ತಲೆ ವಿಡಿಯೋಗಳನ್ನು ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐದು ಜನರನ್ನು ಮಂಗಳವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮಹನಿಂಗ ನಂದಗಾವಿ ಹೇಳಿದ್ದಾರೆ.
ನಗರದ ಉಪನಗರ ಠಾಣೆಯಲ್ಲಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಬಂಧಿತರನ್ನು ಮುಲ್ಲಾ ಓಣಿಯ ಜೋಯಾ ಶಬಾನಾ, ತೊರವಿಹಕ್ಕಲದ ಪರ್ವಿನಾ ಬಾನು, ಡಾಕಪ್ಪ ವೃತ್ತದ ಸಯ್ಯದ್, ಹಳೇ ಹುಬ್ಬಳ್ಳಿಯ ತೌಸಿಫ್ ರೆಹಮಾನ್, ಸಯ್ಯದ್ ತೌಸಿಫ್ ಮತ್ತು ಅಬ್ದುಲ್ ರೆಹಮಾನ್ ಎಂದು ತಿಳಿಸಿದ್ದಾರೆ.
ಬಂಧಿತರು ಚಗನ್‌ಲಾಲ್ ಅವರನ್ನು ಪರಿಚಯಿಸಿಕೊಂಡ ಆರೋಪಿ ಜೋಯಾ ಶಬಾನಾ, ಅವರನ್ನು ಉಣಕಲ್ ಕ್ರಾಸ್‌ಗೆ ಕರೆಸಿಕೊಂಡಿದ್ದಾಳೆ. ನಂತರ ರಾಜನಗರದ ಮನೆಗೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾಳೆ. ನಂತರ ಆರೋಪಿಗಳೆಲ್ಲ ಸೇರಿ ಕೇಳಿದಷ್ಟು ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ, ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಚಗನ್‌ಲಾಲ್ ಸೋಮವಾರ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐದು ಜನರನ್ನು ಬಂಧಿಸಿದ್ದಾರೆ. ಇವರಿಂದ ಐದು ವಿವಿಧ ಕಂಪನಿಯ ಮೊಬೈಲ್ ಫೋನ್’ಗಳು, ಎರಡು ದ್ವಿಚಕ್ರ ವಾಹನ, 9 ಸಾವಿರ ನಗದು ಒಟ್ಟು 93 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.