- Advertisement -
ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು, ಆಟೋದ ಒಳಗಿದ್ದ ಚಾಲಕ ಹಾಗೂ ವೃದ್ಧೆಯನ್ನು ಹೊರ ತೆಗೆದಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಆಟೋ ಚಾಲಕ ಮತ್ತು ಆಟೋದಲ್ಲಿ ಇದ್ದ ವೃದ್ಧೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ಘಟನೆ ಸಂಬಂಧ ಧಾರವಾಡ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ನಗರ ಪಾಲಿಕೆ ಸಿಬ್ಬಂದಿ ಮರ ತೆರವುಗೊಳಿಸಿದರು. ಈ ಅವಾಂತರದಿಂದ ರಸ್ತೆ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು.
- Advertisement -