ಅದ್ದೂರಿಯಾಗಿ ಜರುಗಿದ ಆನೆ ಅಂಬಾರಿ, ತುಲಾಭಾರ ಮಹೋತ್ಸವ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಭವ್ಯವಾದ ಶೋಭಾಯಾತ್ರೆ ಮಾಡಲಾಯಿತು. ಐದು ಆನೆ, ಐದು ಒಂಟೆ, ಐದು ಕುದುರೆಗಳು ಸೇರಿದಂತೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದವು.

ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳನ್ನು ತೆರೆದ ವಾಹನದಲ್ಲಿ ಕೂರಿಸಿ ಭವ್ಯ ಮೆರವಣಿಗೆ ಮಾಡಲಾಯಿತು. ಭಾವೈಕ್ಯತಾ ರಥಯಾತ್ರೆಯಲ್ಲಿ ನೂರಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಿದ್ದರು. ಆನೆಯ ಮೇಲೆ ಅಂಬಾರಿ ಇರಿಸಿ ಫಕೀರ ಸಿದ್ದರಾಮ ಸ್ವಾಮೀಜಿಯವರನ್ನು ಕೂರಿಸಿ ತುಲಾಭಾರ ಮಾಡಲಾಯಿತು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಶೇಷವಾಗಿ ಸಿದ್ಧಪಡಿಸಲಾದ ಬೃಹತ್ ತಕ್ಕಡಿಯಲ್ಲಿ 5,555 ಕೆಜಿ ತೂಕದ ಹತ್ತು ರೂಪಾಯಿ ನಾಣ್ಯಗಳಿಂದ ತುಲಾಭಾರ ಮಾಡಲಾಯಿತು. ಗಣ್ಯರು ನಗಾರಿ ಬಾರಿಸಿ, ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಈ ಎಲ್ಲಾ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದರು.

ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ

ಹೊಸದಾಗಿ ಸಂಸಾರ ಆರಂಭಿಸಲು ಇಬ್ಬರು ಮಕ್ಕಳನ್ನು ಕೊಂದ ದಂಪತಿ

ಆನ್‌ಲೈನ್‌ನಲ್ಲಿ ಎಮ್ಮೆ ಆರ್ಡರ್ ಹಾಕಿದ ಭೂಪ: ಮುಂದೇನಾಯ್ತು..?

About The Author