ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ ಕೆಲ ಯವಕರು ಹಿಂಬಾಲಿಸುತ್ತಿದ್ರಂತೆ. ಅಡ್ಡಗಟ್ಟಿ ಫೋನ್‌ನಲ್ಲಿ ಸಂತ್ರಸ್ತೆಯ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ರಂತೆ. ಇದ್ದಕ್ಕಿಂತ ಬಾಲಕಿ ನಾಪತ್ತೆಯಾಗಿದ್ಲು. ಕುಟುಂಬಸ್ಥರು ಗ್ರಾಮದಲ್ಲೆಲ್ಲಾ ಹುಡುಕಾಡಿದ್ದಾರೆ. ಬಳಿಕ ಗ್ರಾಮದ ಬಾವಿ ಬಳಿ ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಪರಿಶೀಲನೆ ಮಾಡಿದ್ದಾರೆ. ಆಗ ಬಾಲಕಿ ಶವ ಬಾವಿಯಲ್ಲಿ ಇರುವುದು ಗೊತ್ತಾಗಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಅಪ್ರಾಪ್ತೆಯ ಮೃತದೇಹವನ್ನು ಬಾವಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನು, ದುರ್ಘಟನೆ ಖಂಡಿಸಿ ಗ್ರಾಮಸ್ಥರು ಹಾಗೂ ಸಾರ್ವಜನಿಕರೆಲ್ಲಾ ಪ್ರತಿಭಟನೆಗೆ ಮುಂದಾಗಿದ್ರು. ಕ್ಯಾಂಡೆಲ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.




