ಚಲಿಸುತ್ತಿದ್ದ ಸಾರಿಗೆ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

Hubli: ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ‌ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ‌ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ‌ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ.

ಬ್ಯಾಹಟ್ಟಿ ಗ್ರಾಮದ‌ ಬಳಿ ಏಕಾಏಕಿ ಬಸ್ ನ‌ ಪಾಟಾ ಕಟ್ ಆಗಿದೆ.‌ ಇದರಿಂದಾಗಿ ನಿಯಂತ್ರಣ ಕಳೆದುಕೊಂಡು ಬಸ್ ಚಾಲಕ‌ ಬಸ್ ನಿಯಂತ್ರಿಸಲು ಪ್ರಯತ್ನ‌ ಮಾಡಿದ್ರೂ ಸಹ ಸಾಧ್ಯವಾಗದೇ ಪಲ್ಟಿ‌ಹೊಡೆದಿದೆ.‌ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ.

ಇನ್ನು ಗಾಯಗೊಂಡ‌ ಪ್ರಯಾಣಿಕರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ‌ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಇನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

About The Author