Sunday, September 8, 2024

Latest Posts

ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣು..!

- Advertisement -

www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ.

ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ ಹಿನ್ನೆಲೆಯಲ್ಲಿ ತನ್ನ ಮನೆಯಲ್ಲಿ ಫ್ಯಾನಿಗೆ ಸೀರೆ ಇಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

ದರ್ಶನ್ ಕೆ.ಡಿ.ಆರ್, ಕರ್ನಾಟಕ ಟಿವಿ- ತುಮಕೂರು

- Advertisement -

Latest Posts

Don't Miss