Hubballi News: ಹುಬ್ಬಳ್ಳಿ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ವ್ಯಕ್ತಿಯೋರ್ವನ ಮೇಲೆ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಸೂರಪೂರ ತಾಲೂಕಿನ ದ್ಯಾವಾಪೂರ ಗ್ರಾಮದ ಕುಪ್ಪಣ್ಣಾ ಪಠಾದಾರ (40) ಎಂಬಾತರೇ ಮೃತಪಟ್ಟ ದುರ್ದೈವಿ.
ಬಸ್ ನಿಲ್ದಾಣದ ಒಳಗಡೆ ಬಸ್ ಪ್ರವೇಶ ಮಾಡುವಾಗ ಅದೇ ಸಮಯಕ್ಕೆ ದ್ವಿಚಕ್ರ ವಾಹನವು ಹೋಗುತ್ತಿದ್ದ ಸಂದರ್ಭದಲ್ಲಿ ಬಸ್ ತಾಗಿದ ಪರಿಣಾಮ ಹಿಂಬದಿ ಸವಾರ ಕುಪ್ಪಣ್ಣಾ ನಿಯಂತ್ರಣ ತಪ್ಪಿ ಬಸ್ಸಿನ ಮುಂದಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.
ಘಟನೆ ಕುರಿತಂತೆ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನೇ ಜೈಲಿಗೆ ದಬ್ಬಿದ ಮೈಸೂರು ಪೊಲೀಸರು!
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ