- Advertisement -
Hubli News: ಹುಬ್ಬಳ್ಳಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದಲೇ ನೋಂದಣಿಗೆ ಕಾರ್ಮಿಕರು ಮುಗಿಬಿದ್ದಿದ್ದಾರೆ.
ಧನ ಸಹಾಯದ ಮಂಜೂರಾತಿ ಆದೇಶದ ಚೆಕ್ ವಿತರಣೆ, ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ ಧನ ಸಹಾಯದ ಚೆಕ್ ಮತ್ತು ನೋಂದಣಿ ಪ್ರಮಾಣ ಪತ್ರಗಳ ವಿತರಣೆ ಹಾಗೂ ವಿವಿಧ ಕಾರ್ಮಿಕ ಕಾಯ್ದೆಗಳಡಿ ಕಾರ್ಮಿಕರಿಗೆ ಮಂಜೂರಾದ ಆದೇಶದ ಚೆಕ್ ವಿತರಣೆ ಕಾರ್ಯಕ್ರಮವನ್ನು ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಆಯೋಜಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಭಾಗಿಯಾಗಿದ್ದರು.
- Advertisement -