Hubli News: ಹುಬ್ಬಳ್ಳಿ : ಆನ್‌ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್‌ನಲ್ಲಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ, ರಾಕೇಶ್ ಬಿವಿಬಿ ಕಾಲೇಜಿನಲ್ಲಿ ಬಿಇ 6 ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ತನ್ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಕೇಶ್ ನಿತ್ಯ ಆನೈನ್ ಗೇಮ್ ಆಡ್ತಿದ್ದ ಎಂಬ ಮಾಹಿತಿ ತಿಳಿದಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದನಂತೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ವಸತಿ ನಿಲಯಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.
ಇನ್ನು ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ದಾರಿ ಮಧ್ಯೆದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.