Mysuru News: ಮೈಸೂರು : ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಬ್ ಇನ್ಸ್‌ಪೆಕ್ಟರ್ ಸಿಕ್ಕಿ ಬಿದ್ದಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಧ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಕರಣ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸಬ್ ಇನ್ಸ್‌ಪೆಕ್ಟರ್ ರಾಧ 1 ಲಕ್ಷ ರೂ ಡಿಮ್ಯಾಂಡ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದ್ದು, ಡಿವೈಎಸ್‌ಪಿ ಮಾಲ್ತೇಶ್ ಕೃಷ್ಣಯ್ಯ ಸೇರಿ ಹಲವರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.
ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ
ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ