ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಗಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ: Nikhil Kumar

Political News: ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವಂತೆ ಹಾಗೂ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತು.

ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದ್ದು, ಇದರಿಂದ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ, ಸ್ಥಳೀಯ BLOಗಳನ್ನು ದುರುಪಯೋಗಪಡಿಸಿಕೊಂಡು ನಡೆಸಿರುವ ಈ ಪರಿಷ್ಕರಣೆ ಕಾನೂನುಬಾಹಿರ ಎಂದು ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ, ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಗಿಸಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ, ಸ್ವತಂತ್ರವಾಗಿ ನಡೆಯಬೇಕಾದ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ಸರ್ಕಾರದ ಈ ರೀತಿಯ ಹಸ್ತಕ್ಷೇಪ ಮತ್ತು ಸ್ಥಳೀಯ ಆಡಳಿತದ ಮೇಲಿನ ಒತ್ತಡವನ್ನು ನಿಖಿಲ್ ಖಂಡಿಸಿದ್ದಾರೆ.

SIR ಪ್ರಕ್ರಿಯೆಯ ವ್ಯವಸ್ಥಿತ ಪಿತೂರಿಯ ವಿರುದ್ಧ ತಕ್ಷಣವೇ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಯಾಗಬೇಕು ಜೊತೆಗೆ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ ಅಮಾನತುಗೊಳಿಸಬೇಕು, ರಾಮನಗರದ 3 ವಾರ್ಡ್‌ಗಳಲ್ಲಿ ಹೊಸದಾಗಿ SIR ಪ್ರಕ್ರಿಯೆ ನಡೆಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಆಗ್ರಹಿಸಲಾಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಎ. ಮಂಜುನಾಥ್ ಅವರು, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಜಯಮುತ್ತು ರವರು, ಬಿಜೆಪಿ ಜಿಲ್ಲಾಧ್ಯಕ್ಷರು, ಎನ್‌ಡಿಎ ತಾಲ್ಲೂಕು ಅಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author