ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು.
2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್. ರಾಜಣ್ಣ ಹೇಳಿದ್ರು. ರಾಹುಲ್ ಗಾಂಧಿ ವಿರುದ್ಧ ಮಾತಾಡಿದ್ದಾರೆ ಅಂತಾ, ತಕ್ಷಣವೇ ಸಂಪುಟದಿಂದ ವಜಾ ಮಾಡಲಾಗಿತ್ತು. ಸ್ಪಷ್ಟೀಕರಣಕ್ಕೂ ಅವಕಾಶವನ್ನೇ ನೀಡಿರ್ಲಿಲ್ಲ. ಆದ್ರೀಗ ಆರ್‌ಎಸ್‌ಎಸ್ ಗೀತೆ ಹಾಡಿದ್ದ ಡಿಕೆಶಿ, ಕ್ಷಮೆಯಾಚನೆ ಮಾಡಿದ್ದಾರೆ. ಇದನ್ನೇ ಜೆಡಿಎಸ್, ಬಿಜೆಪಿ ಅಸ್ತ್ರ ಮಾಡಿಕೊಂಡಿವೆ.
ಡಿಕೆಶಿ ಕ್ಷಮೆಯಾಚನೆ ಮಾಡ್ತಿದ್ದಂತೆ, ಜೆಡಿಎಸ್ ಟ್ವೀಟ್ ಮೂಲಕ ಕಾಲೆಳೆದಿದೆ. ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಅಂತಾ ವ್ಯಂಗ್ಯವಾಡಿದೆ. ವಿಧಾನಸಭೆಯಲ್ಲಿ RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ, ಅಧಿಕಾರ ಉಳಿಸಿಕೊಳ್ಳಲು ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆ ಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ. ಹೀಗಂತ ಜೆಡಿಎಸ್ ಪಾಳಯ ಟೀಕಿಸಿದೆ.