- Advertisement -
Hubli News: ಹುಬ್ಬಳ್ಳಿ: ತಂದೆಯೊಂದಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ ಯುವಕನಿಗೆ ಹಾವು ಕಚ್ಚಿದೆ, ಕೂಡಲೇ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾದ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಹಾವು ಕಚ್ಚಿಸಿ ಕೊಂಡ ಯುವಕ ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ, ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ ತನ್ನ ತಂದೆ ಜೊತೆ ಶೇಂಗಾ ಕೀಳಲು ಹೋಗಿದ್ದ. ಈ ವೇಳೆ ಫಕ್ಕೀರಪ್ಪ ಅಣ್ಣಿಗೇರಿ ಅವರಿಗೆ ಹಾವು ಕಚ್ಚಿದೆ.
ಹಾವು ಕಚ್ಚಿದ ಕೂಡಲೇ ಹಾವಿನ ತಲೆ ಜಜ್ಜಿ ಕೊಂದಿದ್ದಾನೆ. ನಂತರ ತಂದೆ ಜೊತೆ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗಿದ್ದಾನೆ. ವೈದ್ಯರಿಗೆ ಹಾವನ್ನ ತೋರಿಸಿ, ಇದೆ ಹಾವು ಕಚ್ಚಿದೆ ಚಿಕಿತ್ಸೆ ಕೊಡಿ ಎಂದು ದಾಖಲಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ.
- Advertisement -