- Advertisement -
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ.
ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ ಗಾಯವಾಗಿತ್ತು. ಮುಖ, ಕೈ ಭಾಗಕ್ಕೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಯಿತು.
ಸಿಎಂ ಸಿದ್ದರಾಮಯ್ಯ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕೋಡಿಗೆ ಆಗಮಿಸಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.
- Advertisement -