Thursday, July 31, 2025

Latest Posts

ಫೋಟೋಶೂಟ್ ಮಾಡಿಸಬೇಡ ಎಂದಿದ್ದಕ್ಕೆ, ಯುವತಿ ಆತ್ಮಹತ್ಯೆ..

- Advertisement -

Bengaluru crime news: ಮನೆಯಲ್ಲಿ ಫೋಟೋಶೂಟ್ ಮಾಡಿಸಲು ಹೋಗಬೇಡವೆಂದು, ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ, ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸುಧಾಮನಗರದಲ್ಲಿ ವರ್ಷಿಣಿ(21) ಎಂಬ ಯುವತಿ ಆತ್ಮಹತ್ಯೆಗೆ ಈಡಾಗಿದ್ದು, ಈಕೆ ಇಲ್ಲೇ ವಾಸವಾಗಿದ್ದಳು. ಜಯನಗರದ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, ಫೋಟೋಗ್ರಫಿಯೂ ಕಲಿಯುತ್ತಿದ್ದಳು. ಈ ಯುವತಿ ತಾನು ಮಾಲ್‌ಗೆ ಹೋಗಿ ಫೋಟೋಶೂಟ್ ಮಾಡಿಸಿಕೊಳ್ಳಬೇಕು ಎಂದು, ಚೆಂದವಾಗಿ ರೆಡಿಯಾಗಿದ್ದಳು.

ಆದರೆ ಈಕೆಯ ಪೋಷಕರು ಫೋಟೋಶೂಟ್ ಮಾಡಿಸಿಕೊಳ್ಳಲು ಮಾಲ್‌ಗೆ ಹೋಗಬೇಡ ಎಂದು ಬುದ್ಧಿ ಮಾತು ಹೇಳಿದ್ದಾರೆ. ಈ ಕಾರಣಕ್ಕಾಗಿ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

- Advertisement -

Latest Posts

Don't Miss