Saturday, July 20, 2024

Latest Posts

AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು

- Advertisement -

ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಎಪಿ ಮುಖಂಡರು ಸೇರಿದಂತೆ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ, ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ದರ್ಶನ್ ಜೈನ್ ಸೇರಿದಂತೆ ಅನೇಕ ಪಕ್ಷದ ಮುಖಂಡರುಗಳು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಸಮಸ್ಯೆ ಉಲ್ಬಣಕ್ಕೆ ಕೇಂದ್ರ ಸರ್ಕಾರವು ಕಾರಣ. ಈ ವಿಚಾರದಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರೇ ನೇರ ಹೊಣೆ. ಕಾವೇರಿ ವಿಚಾರದಲ್ಲಿ ಹೋರಾಟಗಳು ನಡೆಯುತ್ತಿದ್ದರೂ, ಸಂಸದರು ಏನನ್ನೂ ಮಾತನಾಡುತ್ತಿಲ್ಲ. ರಾಜ್ಯದ ಜನರಿಗೆ ಗುಲಾಮರಾಗಬೇಕಿದ್ದ ಬಿಜೆಪಿ ಸಂಸದರೆಲ್ಲ ಕೇಂದ್ರ ಸರ್ಕಾರದ ಗುಲಾಮರಾಗಿದ್ದಾರೆ. ಬಿಜೆಪಿಯಿಂದ ಮತ್ತೆ ಸಂಸದರಾಗಬೇಕು ಎನ್ನುವ ಯತ್ನದಲ್ಲಿ ನೀರಿಗಾಗಿ ನಡೆಯುತ್ತಿರುವ ಹೋರಾಟವನ್ನು ನಿರ್ಲಕ್ಷ್ಯಿಸುತ್ತಿದ್ದಾರೆ ಎಂದು ದೂರಿದರು.

ಸ್ವಾತಂತ್ರ್ಯದ ಪೂರ್ವದಿಂದ ಈ ಸಮಸ್ಯೆ ಅಸ್ತಿತ್ವದಲ್ಲಿದೆ. ಸ್ವಾತಂತ್ರ್ಯಾ ಬಂದ ಎಲ್ಲಾ ಸರ್ಕಾರಗಳು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಎಡವಿವೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದ್ದು, ರಾಜ್ಯಕ್ಕೆ ಅನ್ಯಾಯ ಎಸಗಿವೆ. ರಾಜಕೀಯ ಲಾಭಕ್ಕಾಗಿ ಕೆಲಸ ಮಾಡಿವೆ ಹೊರತು ಸಮಸ್ಯೆಯ ಪರಿಹಾರಕ್ಕೆ ಯಾವೊಂದು ಸರ್ಕಾರವು ಪ್ರಯತ್ನಿಸಿಲ್ಲ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಈ ನಿಟ್ಟಿನಲ್ಲಿ ಹೋರಾಟ ಆರಂಭಿಸಿದೆ ಎಂದು ತಿಳಿಸಿದರು.

Traffic Rules Break: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಪೊಲೀಸ್:

DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:

 

- Advertisement -

Latest Posts

Don't Miss