ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಕಳೆದ 52 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಾಗ ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ಕಾರಣಕ್ಕೆ ಪೊಲೀಸರನ್ನು ಬಳಸಿಕೊಂಡು ಬಲವಂತವಾಗಿ ಅವರ ಹೋರಾಟವನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದರು.
ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್
ಪ್ರತಿಭಟನಾ ಸ್ಥಳದಲ್ಲಿ ಹಾಕಲಾಗಿದ್ದ ರೈತರ ಟೆಂಟುಗಳನ್ನು ಕಿತ್ತೆಸೆದು, ಅವರನ್ನು ಬಂಧಿಸುವ ಮೂಲಕ ಪೊಲೀಸರು ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟಿಸುವ ಹಕ್ಕನ್ನು ಈ ರೀತಿ ಹತ್ತಿಕ್ಕುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಬಬಸರಾಜ ಬೊಮ್ಮಾಯಿಯವರಿಗೆ ರೈತರ ಹಿತ ರಕ್ಷಣೆ ಬೇಕಾಗಿಲ್ಲ ಅವರು ತಮ್ಮ ಚುನಾವಣಾ ತಯಾರಿಯಲ್ಲಿ ಮಗ್ನರಾಗಿದ್ದಾರೆ ಕೇವಲ ಬಿಜೆಪಿ ಹೈಕಮಾಂಡ್ ಮೆಚ್ಚಿಸಲು ಅಧಿಕಾರ ನಡೆಸುತ್ತಿದ್ದಾರೆ. ಜನಸಾಮಾನ್ಯರ ಹಿತವನ್ನು ನಿರ್ಲಕ್ಷಿಸುತ್ತಿರುವ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡಲು ನಾಡಿನ ರೈತರು ಒಂದುಗೂಡಬೇಕು ಎಂದು ಬಿ.ಟಿ.ನಾಗಣ್ಣ ಹೇಳಿದರು.
2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ
ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್




