ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ ಕುರಿತು ಕರಪತ್ರ ಹಂಚುವ ಜೊತೆಗೆ ಘೋಷಣೆಗಳನ್ನು ಕೂಗುವ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಬ್ರಿಜೇಶ್ ಕಾಳಪ್ಪ ಮಾತನಾಡಿ, ಪಕ್ಷದ ಆರಂಭ ಉತ್ಸವದ ಅಂಗವಾಗಿ ಇಂದು ಅಗಿಲೆ ಯೋಗೀಶ್ ನೇತೃತ್ವದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿದೆ, ರಾಜ್ಯದಲ್ಲಿ, ದೇಶದಲ್ಲಿ ಅಧಿಕಾರದಲ್ಲಿ ಇರುವ ಪಕಗಳು ಮಾಡುತ್ತಿರುವ ಭ್ರಷ್ಟಾಚಾರ ದೇಶಕ್ಕೆ ಮಾರಕವಾಗಿದೆ, ಈ ಹಿಂದಿನಿಂದಲೂ ಆಡಳಿತ ನಡೆಸಿರುವ ಪಕ್ಷಗಳು ಜನರಿಗೆ ಉತ್ತಮ ಆಡಳಿತ ನಡೆಸಲು ವಿಫಲವಾಗಿವೆ ಎಂದು ದೂರಿದರು. ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒಳಗೊಂಡ ಜನಪರ ಆಡಳಿತ ನೀಡಲು ವಿಫಲವಾಗಿರುವ ಹಿನ್ನೆಲೆ ಹಾಗೂ ಭ್ರಷ್ಟಾಚಾರದಿಂದ ದೇಶದ ಹಾಗೂ ರಾಜ್ಯದ ಜನರು ನಲುಗಿ ಹೋಗಿದ್ದು ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷದ ಜನರ ಪರ ಜನ ಒಲವು ತೋರಿದ್ದಾರೆ.
ಜನರ ಸಹಕಾರದಿಂದ ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸ ಇದ್ದು ಈಗಾಗಲೇ ಅಧಿಕಾರದಲ್ಲಿ ಇರುವ ರಾಜ್ಯಗಳ ಮಾದರಿಯಲ್ಲೇ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಆಮ್ ಆದ್ಮಿ ಪಕ್ಷ ಮುಂದಾಗಿದೆ. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಮಾತನಾಡಿ, ಹಾಸನ ಜಿಲ್ಲೆಯ ನಾಗರಿಕರಿಗೆ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಅರಿವು ಮೂಡಿಸುವ ಜೊತೆಗೆ ತಮ್ಮ ಜೊತೆ ನಾವಿದ್ದೇವೆ ಎಂಬ ಭರವಸೆಯೊಂದಿಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಬೆಂಬಲಿಸಿ ಮತ ನೀಡುವಂತೆ ಮನವಿ ಮಾಡಲಾಗಿದೆ ಎಂದರು. ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ 12 ವರ್ಷಕ್ಕೆ ಕಾಲಿಡುತ್ತಿರುವ ಈ ಸಂಧರ್ಭದಲ್ಲಿ ಎಲ್ಲಾ ಭೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಮೂತ್ರಪಿಂಡ ಕಸಿಗೆ ಸಿಂಗಾಪುರಕ್ಕೆ ತೆರಳಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್