Friday, November 22, 2024

Latest Posts

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

- Advertisement -

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ.

” ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ , ತೊಡೆದು ಹಾಕುವ , ಸರ್ವರಿಗೂ ಸಮಪಾಲು – ಸಮ ಬಾಳನ್ನು ನೀಡುವ ಕಾಲಘಟ್ಟದಲ್ಲಿ ಇರುವಾಗ, ಮನಸ್ಮೃತಿಯ ಹರಿಕಾರರಂತೆ ಅರಗ ಜ್ಞಾನೇಂದ್ರ ಹೇಳಿಕೆ ಇವರ ಸಂಸ್ಕೃತಿಯನ್ನು ತೋರಿಸುತ್ತದೆ. ನಮ್ಮ ಸಂವಿಧಾನಕ್ಕೆ , ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

” ಕಾಂಗ್ರೆಸ್ ಸರ್ಕಾರವು ಇವರ ಮೇಲೆ ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡಲ್ಲಿ ಮುಂದಿನ ದಿನಮಾನಗಳಲ್ಲಿ ಯಾರೂ ದಲಿತ ವರ್ಗಗಳನ್ನು ತುಚ್ಚವಾಗಿ ನೋಡುವುದು, ಮಾತನಾಡುವುದು ತಪ್ಪುತ್ತದೆ. ಸರ್ಕಾರ ಈ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಬೇಕೆಂದು ” ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ

Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್  ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್

- Advertisement -

Latest Posts

Don't Miss