ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ ಶಿಕ್ಷಣ ದಾಖಲಾತಿಗೆ ಹೊಸ ಮಾನದಂಡಗಳನ್ನು ರೂಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಅಲ್ಲದೇ, ಹೆಚ್ಚು ಶುಲ್ಕವನ್ನು ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದರೂ ಸಹ ಇದುವರೆಗೂ ಯಾರ ಮೇಲೂ ಕಠಿಣ ಕ್ರಮವನ್ನು ತೆಗೆದುಕೊಳ್ಳದ ಶಿಕ್ಷಣ ಸಚಿವರ ನಡೆ ಅನುಮಾನ ಮೂಡಿಸುವಂತಿದೆ. ಪೋಷಕರಿಗೆ ವಸೂಲಿ ಆಗಿರುವ ಹೆಚ್ಚುವರಿ ಶುಲ್ಕವನ್ನು ಹಿಂತಿರುಗಿಸುವಂತಹ ಕಠಿಣ ಆದೇಶಗಳನ್ನು ಹೊರಡಿಸುವಂತೆ ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.