Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ ‘ಆಪ್’ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ ಬಂದ ಮೇಲೆ ವಿಶ್ಲೇಷಣೆ ಮಾಡಬಹುದು ಎಂದು ಪಾಟೀಲರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ 39 ಲಕ್ಷ ಮತದಾರರ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎತ್ತಿರುವ ವಿಷಯ ಪ್ರಮುಖವಾಗಿದೆ. ರಾಷ್ಟ್ರೀಯ ವಿಷಯವಾಗಿ ಈ ವಿಷಯ ಚರ್ಚೆಯಾಗಬೇಕು. ಚುನಾವಣಾ ಸಂದರ್ಭದಲ್ಲಾದ ಲೋಪವಷ್ಟೆ ಅಲ್ಲ.. ಮ್ಯಾನ್ಯುಪುಲೇಷನ್ ಎಂದು ಪಾಟೀಲ್ ಹೇಳಿದ್ದಾರೆ.
ಅಕ್ರಮ ವಸಲಿಗರನ್ನ ಅಮೇರಿಕಾ ಗಡಿಪಾರು ಮಾಡುತ್ತಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲರು, ಟ್ರಂಪ್ ಅವರು ಸುಸಂಸ್ಕೃತರಾಗಿ ನಡೆದುಕೊಳ್ಳಬೇಕು.. ಸುಸಂಸ್ಕೃತ ಸಮುದಾಯ ಅಂತಾ ಕರೆಸಿಕೊಳ್ಳುವ ಅಮೇರಿಕಾ ಭಾರತೀಯರನ್ನ ಈ ರೀತಿ ನಡೆಸಿಕೊಂಡಿದ್ದು ದುರ್ದೈವ. ಅಮೇರಿಕಾ ಇಷ್ಟೊಂದು ಬೆಳೆಯಲು ಭಾರತೀಯರ ಕೊಡುಗೆ ಅಮೂಲ್ಯ.. ಇದನ್ನ ಅರ್ಥ ಮಾಡಿಕೊಂಡು ಟ್ರಂಪ್ ಸುಸಂಸ್ಕೃತರಾಗಿ ನಡೆದುಕೊಳ್ಳಲಿ ಎಂದು ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.