ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ
ಆಮ್ ಆದ್ಮಿ ಪಕ್ಷದ ಪಾರದರ್ಶಕ ಆಡಳಿತಕ್ಕೆ ಮನಸೋತು ಅನೇಕ ಗಣ್ಯರು ಹಾಗೂ ಸಾಮಾನ್ಯ ಜನರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶಾಂದ್ಯಂತ ಆಮ್ ಆದ್ಮಿ ಪಕ್ಷ ವಿಸ್ತರಿಸಲಿದೆ ಎಂದು ಹೇಳಿದರು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಮಾತನಾಡಿ ಮಳೆಯಿಂದ ರೈತರ ಬೆಳೆಗಳು ಸಂಪೂರ್ಣ ನಾಶಗೊಂಡಿವೆ. ರೈತರಿಗೆ ನಾವು ಬೆನ್ನಲುಬಾಗಿ ನಿಲ್ಲಬೇಕು. ನಷ್ಟ ಅನುಭವಿಸಿದ ರೈತರಿಗೆ ಒಂದು ಎಕೆರೆಗೆ 1 ಲಕ್ಷ ಪರಿಹಾರ ಧನ ನೀಡಬೇಕೆಂದು ಒತ್ತಾಯಿಸುತ್ತುವೆ ಎಂದರು. ಪ್ರತಿ ಗ್ರಾಮಕ್ಕೆ ತೆರಳಿ ಪರಿಶೀಲಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅಂಕಿ-ಅಂಶ ದಾಖಲಾತಿಯನ್ನು ಕಳಿಸುತ್ತೇವೆ ಎಂದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ