ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ ಹಣ ಎಲ್ಲಿಂದ ಬರುತ್ತದೆ. ಹೀಗೆ ಸುಳ್ಳು ಭರವಸೆ ಕೊಟ್ಟರೆ ರೈತರು, ನೀರಾವರಿ, ರಸ್ತೆಗಳು ಇದಕ್ಕೆಲ್ಲ ಎಲ್ಲಿಂದ ದುಡ್ಡು ತರುತ್ತಾರೆ ಎಂದು ಪ್ರಶ್ನಿಸಿದರು.
ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಅನೇಕ ಕಾರ್ಯಕ್ರಮಗಳನ್ನ ಜಾರಿಗೆ ತಂದರು, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ನವರು ವೋಟಿಗಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಸುಳ್ಳು ಭರವಸೆ ಕೊಟ್ಟು ಚುನಾವಣೆ ಎದುರಿಸುತ್ತಿದ್ದಾರೆ. ಇವರ ಸುಳ್ಳು ಭರವಸೆಯನ್ನ ಜನರು ನಂಬಲ್ಲ. ಜನರಿಗೆ ಎಲ್ಲವೂ ಗೊತ್ತಾಗಲಿದೆ ಅವರೇ ಪಾಠ ಕಲಿಸುತ್ತಾರೆ ಎಂದು ಟಾಂಗ್ ನೀಡಿದರು.
ನಿಮ್ಮಲ್ಲಿ ಈ ಗುಣಗಳಿವೆಯೇ..? ಸಮಾಜ ನಿಮ್ಮನ್ನು ಹೇಗೆ ಗುರಿತಿಸುತ್ತದೆ ಎಂದು ತಿಳಿಯಿರಿ..!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು, ಪಾಕಿಸ್ತಾನದಲ್ಲಿ ನೆಲೆಯೂರಿದ್ದಾನಂತೆ..!