ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್. ಪಾಟೀಲ್ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು.
ರಾಹುಲ್ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ ತಳ್ಳಿ ಹಾಕಿದೆ. ಈ ಎಲ್ಲಾ ಆರೋಪ ನಿರಾಧಾರ ಅಂತಾ ಹೇಳಿದೆ. ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು, ಆಧಾರ ರಹಿತವಾಗಿವೆ. ಯಾವುದೇ ಸಾರ್ವಜನಿಕರು ಆನ್‌ಲೈನ್‌ನಲ್ಲಿ, ಯಾವುದೇ ಮತವನ್ನು ಅಳಿಸಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶ ನೀಡದೆ, ಯಾವುದೇ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ ಎಂದು, ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
2023ರಲ್ಲಿ ಮತದಾರರನ್ನು ಮೋಸದಿಂದ ಅಳಿಸಲು, ಪ್ರಯತ್ನಗಳು ನಡೆದಿವೆ ಎಂಬುದನ್ನು ಚುನಾವಣಾ ಆಯೋಗ ಒಪ್ಪಿಕೊಂಡಿದೆ. ಆದರೆ ಆ ಪ್ರಯತ್ನಗಳೆಲ್ಲಾ ವಿಫಲವಾಗಿವೆ ಅಂತಾ ಸ್ಪಷ್ಟನೆ ಕೊಟ್ಟಿದೆ. ಇದೇ ವಿಚಾರವಾಗಿ ಚುನಾವಣಾ ಆಯೋಗವು, ಎಫ್‌ಐಆರ್ ಅನ್ನು ದಾಖಲಿಸಿತ್ತು. ಕಾಂಗ್ರೆಸ್ ಮತಗಳನ್ನು ವ್ಯವಸ್ಥಿತಾಗಿ ಅಳಿಸಿ ಹಾಕಲಾಗ್ತಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು, ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು ಎಂದು ರಾಹುಲ್ ಗಾಂಧಿ ಆರೋಪಿಸಿದ್ರು.