ಯಲಹಂಕ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕಾರ್ಯಕರ್ತರು ಯಲಹಂಕ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಹತ್ರಾಸ್ ನಲ್ಲಿ ಯುವತಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ದುರುದ್ದೇಶದಿಂದ ಯುವತಿಯ ನಾಲಿಗೆ ಕತ್ತರಿಸಿ ಪೈಶಾಚಿ ಕೃತ್ಯವೆಸಗಿದ್ದಾರೆ. ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು, ಯಲಹಂಕ ತಹಶೀಲ್ದಾರ್ ರಘುಮೂರ್ತಿ ಮೂಲಕ ರಾಷ್ಟಪತಿ ರಮಾನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ನೀಡಿದರು.
ಎಬಿವಿಪಿ ಕಾರ್ಯಕರ್ತ ಉತ್ಕರ್ಷ್ ಮಾತನಾಡಿ, ಭಾರತದಲ್ಲಿ ಹೆಣ್ಣನ್ನು ದೇವತೆ ಎಂದು ಪೂಜಿಸುತ್ತಾರೆ. ಆದ್ರೆ ಅಂತಹ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ. ವಿದೇಶಗಳಲ್ಲಿ ಈ ರೀತಿಯ ಅತ್ಯಾಚಾರ ನಡೆದು ಸಾಬೀತಾದರೆ, ಸ್ಥಳದಲ್ಲೇ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅಪರಾಧಿಗಳಿಗೆ ಶಿಕ್ಷೆ ನೀಡಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಅತ್ಯಾಚಾರಿಗಳಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು