- Advertisement -
ಯಲಹಂಕ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಾನುಕುಂಟೆ ಶಾಖೆ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಡ್ರಗ್ಸ್ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಸರ್ಕಾರವು ಅಂತಹ ದಂಧೆಕೋರರನ್ನು ಕೂಡಲೇ ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಆಗ್ರಹಿಸಿತು.
ಸಹಿ ಸಂಗ್ರಹ ಅಭಿಯಾನದಲ್ಲಿ ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ ಹಾಗೂ
ಯಲಹಂಕ ವಿಭಾಗದ ಎಬಿವಿಪಿ ಜಂಟಿ ಕಾರ್ಯದರ್ಶಿ ಡಾನೇಶ್ ಭಗತ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು
- Advertisement -