Thursday, December 12, 2024

Latest Posts

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

- Advertisement -

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ ಹಿನ್ನೆಲೆ ದಾಳಿ ನಡೆಸಲಾಗಿದೆ. ಸಂಜೆಯವರೆಗೂ ಪರಿಶೀಲನೆ ನಡೆಸಿ ದಾಳಿ ಕುರಿತು ಮಾಹಿತಿ ನೀಡುವುದಾಗಿ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು

- Advertisement -

Latest Posts

Don't Miss