Wednesday, September 17, 2025

Latest Posts

ಚಂದಾಪುರ-ಅತ್ತಿಬೆಲೆ ವಾಹನ ದಟ್ಟಣೆಗೆ ಕ್ರಮ: ಡಾ.ಸಿ.ಎನ್.ಮಂಜುನಾಥ್

- Advertisement -

Political News: ಆನೇಕಲ್‌ನ ಚಂದಾಪುರ- ಅತ್ತಿಬೆಲೆ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತು ರಸ್ತೆ ಅಪಘಾತವನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಡಾ.ಸಿ.ಎನ್.ಮಂಜುನಾಥ್, ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಂದಾಪುರ ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಕಾರಣ, ಇಲ್ಲಿ ಜನಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿಯ ಸುತ್ತಮುತ್ತಲು ಗ್ರಾಮಗಳಿರುವ ಕಾರಣ, ಅಲ್ಲಿ ಜನಸಂಚಾರ ಹೆಚ್ಚಾಗಿರುತ್ತದೆ. ಕೆಲಸಕ್ಕೆ ಹೋಗುವವರು, ಶಾಲೆಗೆ ಹೋಗುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾಹನ ದಟ್ಟಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮಂಜುನಾಥ್ ಹೇಳಿದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಾಲ್ಕು ಬ್ಲಾಕ್ ಸ್ಪಾಟ್‌ ಗುರುತಿಸಲಾಗಿದೆ. ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮೇಲ್ಸೆತುವೆ ಮತ್ತು ರಸ್ತೆ ನಿರ್ಮಾಣಕ್ಕೆ 160 ಕೋಟಿ ವೆಚ್ಚದ ಟೆಂಡರ್ ಕರೆಯಲಾಗಿದೆ. ಚಂದಾಪುರ ರೈಲ್ವೆ ಕೆಳಸೇತುವೆ ಅಗಲೀಕರಣಕ್ಕೆ 60 ಕೋಟಿ ರೂಪಾಯಿ ಟೆಂಡರ್ ಕರೆಯಲಾಗಿದೆ. ಈ ಮೂಲಕ ವಾಹನ ದಟ್ಟಣೆ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ.

- Advertisement -

Latest Posts

Don't Miss