Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಮಗಳು ನೇಹಾ ಕೊಲೆ ಪ್ರಕರಣದ ಬಗ್ಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ. ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ನಾನು ನೇಹಾ ಮರ್ಡರ್‌ನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಕೊಲೆ ಮಾಡಿರುವ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಅವನಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸುತ್ತಿದ್ದೇವೆ. ಹಲವು ಕಡೆ ಈ ರೀತಿಯಾಗುತ್ತದೆ. ಹಾಗಂತ ನಾವು ಲಾ ಆ್ಯಂಡ್ ಆರ್ಡರ್‌ನ್ನು ಸಿರಿಯಸ್ ಆಗಿ ತೆಗೆದುಕೊಂಡಿಲ್ಲ ಅಂತೇನಿಲ್ಲ. ನಾವು ಈ ಕೇಸನ್ನು ಸಿರಿಯಸ್ ಆಗಿ ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ಆದರೆ ಯಾವುದೇ ಕೃತ್ಯ, ದರೋಡೆ, ಕೊಲೆ, ಕಳ್ಳತನ ಏನೇ ಆಗಿರಲಿ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ. ಮತ್ತು ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆ ಕೊಡಿಸಲು ಪ್ರಯತ್ನ ಪಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ.
ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ತೆಗೆದುಕೊಳ್ಳುತ್ತೇವೆ. #NehaHiremath #MurderCase pic.twitter.com/BoYEhNh4y4— Siddaramaiah (@siddaramaiah) April 20, 2024
ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?
ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ




