ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ ಕ್ಷಣವೆಂದು ಬರೆದುಕೊಂಡಿದ್ದಾರೆ. ಇನ್ನು ಇದನ್ನು ನಾನು ಕನಸಿನಲ್ಲಷ್ಟೇ ನೋಡಲು ಸಾಧ್ಯವಾಗಿತ್ತು. ಆ ಕನಸು ಇಂದು ನನಸಾಗಿದೆ. ಈ ಸುಂದರ ಮಂದಿರ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆಯಾಗಿದೆ ಎಂದು ಶಂಕರ್ ಮಹಾದೇವನ್ ಹೇಳಿದ್ದಾರೆ.

ಈ ಬಾಲಿವುಡ್ ದಿಗ್ಗಜರೆಲ್ಲ ಅಬುಧಾಬಿಯ ಸ್ವಾಮಿ ನಾರಾಯಣ ದೇೇವಸ್ಥಾನದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಕಳೆದ ತಿಂಗಳು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲೂ ಇವರೆಲ್ಲ ಹಾಜರಿದ್ದರು. ಮಂಡ್ಯ ಸಂಸದೆ ಸುಮಲತಾ ಕೂಡ ಅಬುಧಾಬಿ ದೇವಸ್ಥಾನಕ್ಕೆ ಹೋಗಿರುವುದು ವಿಶೇಷ ಸಂಗತಿ.

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ

ಇಸ್ಪಿಟ್ ಅಡ್ಡೆ ಮೇಲೆ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ

About The Author