ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು. ಈ ವರದಿಯನ್ನು ನ್ಯಾಯಾಲಯ ಪರಿಶೀಲಿಸುತ್ತಿದೆ. ಇದರಿಂದ ನಟ ಅರ್ಜುನ್ ಸರ್ಜಾಗೆ ಮೀ ಟೂ ಆರೋಪದಲ್ಲಿ ದೊಡ್ಡ ರಿಲೀಪ್ ಸಿಕ್ಕಂತೆ ಆಗಿದೆ.
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀ ಟೂ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಈ ಕೇಸ್ ವಿಚಾರಣೆ ನಡೆಸಿದ ಕಬ್ಬನ್ ಪಾರ್ಕ್ ಪೊಲೀಸರು ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ಸಂಬಂದ ವಿಚಾರಣೆ ನಡೆಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯವು,ಪೊಲೀಸ್ ರೂ ಮೀ ಟೂ ಪ್ರಕರಣದಲ್ಲಿ ಅರ್ಜುನ್ ಸರ್ಜಾ ವಿರುದ್ಧ ಸಲ್ಲಿದ್ದಂತ ಬಿ-ರಿಪೋರ್ಟ್ ವರದಿಯನ್ನು ಅಂಗೀಕರಿಸಿದೆ. ಇದರಿಂದ ಅರ್ಜುನ್ ಸರ್ಜಾಗೆ ಬಿಗ್ ರಿಲೀಪ್ ಸಿಕ್ಕಿದೆ.