Tuesday, April 15, 2025

Latest Posts

Darshan Case : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

- Advertisement -

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ.

ಈ ಕುರಿತು ಇಂದು ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದ ಹಿನ್ನೆಲೆ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ ಎಂದು ಹೇಳಿದರು.

ರಾಜಾತಿಥ್ಯ ವಿಚಾರದ ಕುರಿತು ಮಾಜಿ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ನಾವೆಲ್ಲಾ ಈ ವಿಚಾರದಲ್ಲಿ ವಿವೇಚನೆ ಇಟ್ಟುಕೊಂಡು ಮಾತನಾಡೋಣ. ಜೈಲಿನಲ್ಲಿ ಇರುವುದೇ ಕ್ರಿಮಿನಲ್ಸ್‌ ಅಲ್ವಾ ಎಂದು ಪ್ರಶ್ನೆ ಮಾಡಿದರು. ಅಲ್ಲಿ ಓಡಾಟ ನಡೆಸೋಕೆ ಯಾರು ಸಿಗುತ್ತಾರೆ. ಯಾವುದಾದರೂ ಒಂದು ತಪ್ಪು ಮಾಡಿದವರೇ ಅಲ್ವಾ ಜೈಲಿಗೆ ಹೋಗೋದು ಎಂದು ದರ್ಶನ್‌ರನ್ನು ಸಮರ್ಥನೆ ಮಾಡಿಕೊಂಡಿದ್ರು.

- Advertisement -

Latest Posts

Don't Miss