- Advertisement -
Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಲ್ಲದೇ, ನೆಚ್ಚಿನ ನಟನೊಂದಿಗೆ ಸೆಲ್ಫಿ ತೆಗೆದುಕೊಂಡರು.
ಇನ್ನೊಂದೆಡೆ ಭೀಮ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ನಟ ದುನಿಯಾ ವಿಜಯ್ ಕೂಡ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು. ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಲಿಂಗ ಸ್ವಾಮೀಜಿಯನ್ನ ಭೇಟಿ ಮಾಡಿ, ದುನಿಯಾ ವಿಜಯ್ ಆಶೀ
- Advertisement -